Karwar Court Jobs 2026: SSLC ಪಾಸಾದವರಿಗೆ ಕಾರವಾರ ಜಿಲ್ಲಾ ನ್ಯಾಯಾಲಯದಲ್ಲಿ 78 ಹುದ್ದೆಗಳಿಗೆ ಭರ್ಜರಿ ನೇಮಕಾತಿ!
ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯವು ಉತ್ತಮ ಅವಕಾಶವನ್ನು ತಂದಿದೆ. ಕಾರವಾರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ವ್ಯಾಪ್ತಿಯಲ್ಲಿ ಖಾಲಿ ಇರುವ ಜವಾನ (Peon) ಹಾಗೂ ಆದೇಶ ಜಾರಿಕಾರ (Process Server) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ ಮತ್ತು ಮಾಸಿಕ ವೇತನ ಈ ನೇಮಕಾತಿಯಡಿ ಒಟ್ಟು 78 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಹುದ್ದೆಗಳ ವಿವರ ಹಾಗೂ ವೇತನ ಶ್ರೇಣಿ ಕೆಳಗಿನಂತಿದೆ : ವೇತನ ಶ್ರೇಣಿ : ಜವಾನ (Peon) : ₹27,000 ರಿಂದ ₹46,675 ಗಳವರೆಗೆ ಆದೇಶ ಜಾರಿಕಾರ (Process Server): ₹27,300 ರಿಂದ ₹61,300 ಗಳವರೆಗೆ ಶೈಕ್ಷಣಿಕ ಅರ್ಹತೆ ಮತ್ತು ವಿಶೇಷ ಷರತ್ತುಗಳು ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ SSLC (10ನೇ ತರಗತಿ) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕಡ್ಡಾಯವಾಗಿ ಉತ್ತೀರ್ಣರಾಗಿರಬೇಕು. ವಿಶೇಷ ಷರತ್ತುಗಳು : ಜವಾನ ಹುದ್ದೆಗೆ : ಅಭ್ಯರ್ಥಿಗಳಿಗೆ ಕನ್ನಡ ಭಾಷೆಯನ್ನು ಓದಲು ಮತ್ತು ಬರೆಯಲು ಬರುವುದು ಕಡ್ಡಾಯ. ಆದೇಶ ಜಾರಿಕಾರ ಹುದ್ದೆಗೆ : ಭಾರಿ ಅಥವಾ ಹಗುರ ವಾಹನ ಚಾಲನಾ ಪರವಾನಗಿ (HMV / LMV Driving License) ಹೊಂದಿರುವ ಅಭ್ಯರ್ಥಿಗಳಿಗೆ ಆಯ್ಕೆ ಪ್ರಕ್ರಿಯೆಯಲ್ಲಿ ಮೊದಲ ಆದ್ಯತೆ ನೀಡಲಾಗುತ್...