India Post Recruitment 2026: 10ನೇ ತರಗತಿ ಪಾಸಾದವರಿಗೆ ಬಂಪರ್ ಅವಕಾಶ; GDS ಹುದ್ದೆಗೆ ಅರ್ಜಿ ಸಲ್ಲಿಸುವುದು ಹೇಗೆ?
ಭಾರತೀಯ ಅಂಚೆ ಇಲಾಖೆಯಲ್ಲಿ ಇಂಡಿಯಾ ಪೋಸ್ಟ್ ಖಾಲಿ ಇರುವ ಗ್ರಾಮೀಣ ಡಾಕ್ ಸೇವಕ್ GDS ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಹತ್ತನೇ ತರಗತಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 10ನೇ ತರಗತಿ ಪಾಸದ 18-40 ವರ್ಷದ ಅಭ್ಯರ್ಥಿಗಳ ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಆಗಸ್ಟ್ 31 ರಿಂದ ಸೆಪ್ಟೆಂಬರ್ 19 ರ ವರೆಗೆ ನೋಂದಣಿ, ಸೆಪ್ಟೆಂಬರ್ 2ರಿಂದ 21ರವರೆಗೆ ಆನ್ಲೈನ್ ಅರ್ಜಿ ಸಲ್ಲಿಕೆ ನಡೆಯಲಿದೆ. ಯಾವುದೇ ಲಿಖಿತ ಪರೀಕ್ಷೆ ಇಲ್ಲದೆ, ಕೇವಲ 10ನೇ ತರಗತಿಯ ಅಂಕಗಳ ಆಧಾರದ ಮೇಲೆಯೇ ಮೆರಿಟ್ ಪಟ್ಟಿ ಸಿದ್ಧಪಡಿಸಿ ಆಯ್ಕೆಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ indiapost.gov.in ಗೆ ಭೇಟಿ ನೀಡಿ.
ಅರ್ಜಿ ಸಲ್ಲಿಕೆ ದಿನಾಂಕಗಳು ಮತ್ತು ಆನ್ ಲೈನ್ ಪ್ರಕ್ರಿಯೆ..
ಇಂಡಿಯಾ ಪೋಸ್ಟ್ ಜಿಡಿಎಸ್ ನೇಮಕಾತಿ ಪ್ರಕ್ರಿಯೆಯು ಆಗಸ್ಟ್ 31 ರಂದು ಪ್ರಾರಂಭವಾಗಲಿದ್ದು ಸೆಪ್ಟಂಬರ್ 19 ರವರೆಗೆ ನೋಂದಣಿ ಮಾಡಿಕೊಳ್ಳಲು ಅವಕಾಶವಿರುತ್ತದೆ. ಆನ್ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಸೆಪ್ಟೆಂಬರ್ 2ರಿಂದ ಪ್ರಾರಂಭವಾಗಿ ಸೆಪ್ಟೆಬರ್ 21ಕ್ಕೆ ಮುಕ್ತಾಯಗೊಳ್ಳಲಿದೆ. ಅರ್ಜಿಯಲ್ಲಿ ಯಾವುದೇ ತಪ್ಪುಗಳಿದ್ದರೆ ಸರಿಪಡಿಸಲು ಸೆಪ್ಟೆಂಬರ್ 23ರಿಂದ 24ರ ವರೆಗೆ ತಿದ್ದುಪಡಿ ವಿಂಡೋ ತೆರೆದಿರುತ್ತದೆ. ಆಸಕ್ತಿ ಇರುವ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ indiapost.gov.in ಮೂಲಕವೇ ಆನ್ಲೈನ್ ಅರ್ಜಿ ಸಲ್ಲಿಸಬೇಕಾಗಿರುತ್ತದೆ.
ಅರ್ಹತಾ ಮಾನದಂಡಗಳು ಮತ್ತು ವಯೋಮಿತಿ.
ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ ಹತ್ತನೇ ತರಗತಿ ಪಾಸ್ ಆಗಿರಬೇಕು. SSLC ಯಲ್ಲಿ ಗಣಿತ ಮತ್ತು ಇಂಗ್ಲಿಷ್ ವಿಷಯಗಳನ್ನು ಕಡ್ಡಾಯವಾಗಿ ವ್ಯಾಸಂಗ ಮಾಡಿರಬೇಕು. ಭಾಷಾಜ್ಞಾನ : ಅರ್ಜಿ ಸಲ್ಲಿಸುವ ರಾಜ್ಯದ ಸ್ಥಳೀಯ ಭಾಷೆಯ ಜ್ಞಾನವನ್ನು ಹೊಂದಿರಬೇಕು. ವಯೋಮಿತಿ : ಅಭ್ಯರ್ಥಿಗಳ ವಯಸ್ಸು 18ರಿಂದ 40 ವರ್ಷಗಳ ಒಳಗಿರಬೇಕು. ಸರ್ಕಾರಿ ನಿಯಮಗಳ ಪ್ರಕಾರ ಅರ್ಹ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ ಸಡಲಿಕ್ಕೆ ಇರಲಿದೆ.
ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತದೆ?
ಇಂಡಿಯಾ ಪೋಸ್ಟ್ ಜಿಡಿಎಸ್ ನೇಮಕಾತಿಗೆ ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. ಅಭ್ಯರ್ಥಿಗಳು ಹತ್ತನೇ ತರಗತಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಸಿಸ್ಟಮ್ ಆಟೋಮೇಟೆಡ್ ಮೆರಿಟ್ ಪಟ್ಟಿ ಸಿದ್ಧಪಡಿಸಿ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳ ಶೈಕ್ಷಣಿಕ ದಾಖಲೆಗಳನ್ನು ಎಪಿಐ ಸೇತು, ಡಿಜಿ ಲಾಕರ್ ಅಥವಾ ಶೈಕ್ಷಣಿಕ ಮಂಡಳಿಯ ಅಧಿಕೃತ ವೆಬ್ ಸೈಟ್ ಮೂಲಕ ಆನ್ಲೈನ್ ನಲ್ಲೆ ಪರಿಶೀಲಿಸಲಿದೆ.
ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ವಿಧಾನ ಈ ಕೆಳಗಿನಂತಿದೆ.
. ಮೊದಲಿಗೆ ಇಂಡಿಯಾ ಪೋಸ್ಟ್ ನ ಅಧಿಕೃತ ವೆಬ್ ಸೈಟ್ indiapost.gov.in ಗೆ ಭೇಟಿ ನೀಡಿ.
. ಮುಖಪುಟದಲ್ಲಿ ಕಾಣಿಸುವ ಇಂಡಿಯಾ ಪೋಸ್ಟ್ ಜಿ ಡಿ ಎಸ್ recruitment 2026 registration ಲಿಂಕ್ ಮೇಲೆ ಕ್ಲಿಕ್ ಮಾಡಿ.
. ತೆರೆಯುವ ಹೊಸ ಪುಟದಲ್ಲಿ ನಿಮ್ಮ ಮೂಲ ವಿವರಗಳನ್ನು ನೀಡಿ ನೋಂದಾಯಿಸಿಕೊಳ್ಳಿ.
. ಲಾಗಿನ್ ಆಗಿ ಅರ್ಜಿ ನಮೂನೆಯನ್ನು ಸರಿಯಾಗಿ ಭರ್ತಿ ಮಾಡಿ ಹಾಗೂ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಸಬ್ಮಿಟ್ ಮಾಡಿ.
. ಅರ್ಜಿ ಸಲ್ಲಿಕೆ ಯಶಸ್ವಿಯಾದ ನಂತರ ಭವಿಷ್ಯದ ಉಲ್ಲೇಖಕ್ಕಾಗಿ ಕನ್ಫರ್ಮೇಶನ್ ಪೇಜ್ ನ ಪ್ರಿಂಟ್ ಔಟ್ ತೆಗೆದುಕೊಳ್ಳಿ.
ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಗೊಂಬೆ ಕನ್ನಡ ಅಪ್ಡೇಟ್ಸ್ www.gombekannada.com ಗೆ ಭೇಟಿ ನೀಡಿ.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ