ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನಲ್ಲಿ ನೇರ ಸಂದರ್ಶನದ ಮೂಲಕ ವಿವಿಧ ಹುದ್ದೆಗಳ ನೇಮಕಾತಿ 2026: ಹುದ್ದೆಗಳ ಪ್ರಮುಖ ವಿವರಗಳು.
ಕರ್ನಾಟಕ ಸರ್ಕಾರದ ಅಧೀನದಲ್ಲಿ ಆಯುಷ್ಮಾನ್ ಭಾರತ್ ಯೋಜನೆಗಳ ಅನುಷ್ಠಾನಕ್ಕಾಗಿ ವೈದ್ಯರು, ಡೇಟಾ ಅನಾಲಿಸ್ಟ್ ಸೇರಿದಂತೆ 16 ಗುತ್ತಿಗೆ ಆಧಾರಿತ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಂಗಸಸ್ಥೆಯಾದ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಆಯುಷ್ಮಾನ್ ಭಾರತ್ ಯೋಜನೆಯ ಅನುಷ್ಠಾನಕ್ಕಾಗಿ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನವನ್ನು ಆಯೋಜಿಸಿದೆ ಅರ್ಹ ಅಭ್ಯರ್ಥಿಗಳಿಂದ ಸೆಪ್ಟಂಬರ್ 11ರಂದು ಬೆಂಗಳೂರಿನಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಹೆಚ್ಚಿನ ವಿವರಗಳಿಗೆ SAST ವೆಬ್ ಸೈಟ್ ಗೆ ಭೇಟಿ ನೀಡಿ.
' ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ- ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಹಾಗೂ ಇತರೆ ಆರೋಗ್ಯ ಯೋಜನೆಗಳ ಅನುಷ್ಠಾನಕ್ಕಾಗಿ ಈ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಆಯ್ಕೆಯಾದ ಅಭ್ಯರ್ಥಿಗಳು ಕಚೇರಿ ಹಾಗೂ ಕ್ಷೇತ್ರ ಮಟ್ಟದಲ್ಲಿ ಕರ್ತವ್ಯ ನಿರ್ವಹಿಸಬೇಕಿರುತ್ತದೆ.
ಖಾಲಿ ಇರುವ ಹುದ್ದೆಗಳ ಪ್ರಮುಖ ವಿವರಗಳು:
ಈ ನೇಮಕಾತಿ ಅಭಿಯಾನದ ಮೂಲಕ ಒಟ್ಟು 16 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ ಅವುಗಳಲ್ಲಿ 11 ಹಿರಿಯ ಎಕ್ಸಿಕ್ಯೂಟಿವ್ ವೈದ್ಯರು ( senior executive doctors ), 02 ಎಕ್ಸಿಕ್ಯೂಟಿವ್ ವೈದ್ಯರು ( 2A claims ), 1 ಪ್ರಾದೇಶಿಕ ಸಲಹೆಗಾರರು - ಮೈಸೂರು ವಿಭಾಗ, 1 ಟೀಮ್ ಲೀಡರ್ ವೈದ್ಯರು ( team leader doctor- KASS Scheme ) ಮತ್ತು 1 ಡೇಟ ಅನಾಲಿಸ್ಟ್ ( data analyst- M&E ) ಹುದ್ದೆಗಳು ಸೇರಿವೆ.
ಅಭ್ಯರ್ಥಿಗಳನ್ನು ಮೆರಿಟ್, ಶೈಕ್ಷಣಿಕ ಅರ್ಹತೆ, ರೋಸ್ಟರ್ ಹಾಗೂ ಟ್ರಸ್ಟ್ ನ ನಿಯಮಾವಳಿಗಳ ಪ್ರಕಾರ ಆಯ್ಕೆ ಮಾಡಲಾಗುತ್ತದೆ.
ಗುತ್ತಿಗೆಯ ಅವಧಿ ಮತ್ತು ಸಂದರ್ಶನದ ಸಮಯ:
ಆಯ್ಕೆಯಾಗುವ ಅಭ್ಯರ್ಥಿಗಳು ಗುತ್ತಿಗೆ ಅವಧಿಯನ್ನು ಆರಂಭದಲ್ಲಿ ಒಂದು ವರ್ಷದ ಅವಧಿಗೆ ನೇಮಕ ಮಾಡಿಕೊಳ್ಳಲಾಗುವುದು, ಕಾರ್ಯಕ್ಷಮತೆ ಹಾಗೂ ಅಗತ್ಯಕ್ಕೆ ಅನುಗುಣವಾಗಿ ವಿಸ್ತರಿಸಲಾಗುವುದು.
ನೇರ ಸಂದರ್ಶನ ದಿನಾಂಕ 11-09-2026 ರಂದು ನಡೆಯಲಿದೆ. ಅಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 12.30 ರವರೆಗೆ ನೋಂದಣಿ ಪ್ರಕ್ರಿಯೆ ಮಾಡಲಾಗುವುದು, ಬೆಳಗ್ಗೆ 10.45 ರಿಂದ ಮಧ್ಯಾಹ್ನ 1.30 ರವರೆಗೆ ಕಂಪ್ಯೂಟರ್ ಪರೀಕ್ಷೆ ಹಾಗೂ ಮಧ್ಯಾಹ್ನ 2.30 ರಿಂದ ಸಂಜೆ 5.30 ರವರೆಗೆ ನೇರ ಸಂದರ್ಶನ ನಡೆಯಲಿದೆ.
ಸಂದರ್ಶನ ನಡೆಯುವ ಸ್ಥಳ ಮತ್ತು ಅರ್ಜಿ ಸಲ್ಲಿಸುವ ವಿವರಗಳು:
ಅಭ್ಯರ್ಥಿಗಳು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್, ಆರೋಗ್ಯ ಸೌಧ, ಏಳನೇ ಮಹಡಿ, ಮಾಗಡಿ ರಸ್ತೆ, ಬೆಂಗಳೂರು 560023 ಈ ವಿಳಾಸದಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬಹುದು. ನಮೂನೆ ಹಾಗೂ ಹುದ್ದೆಗಳ ಕುರಿತು ಹೆಚ್ಚಿನ ನಿಯಮ ಮತ್ತು ವಿವರಗಳನ್ನು ಪಡೆಯಲು ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ https://sast.karnataka.gov.in/sast/ ಗೆ ಭೇಟಿ ನೀಡಬಹುದಾಗಿದೆ.
ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಗೊಂಬೆ ಕನ್ನಡ ಅಪ್ಡೇಟ್ಸ್ ಗೆ ಭೇಟಿ ನೀಡಿ.😊

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ